Header Ads Widget

header ads

ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

 




ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ಅಡುಗೆ ಅನಿಲ ಸಿಲಿಂಡರ್ ಹಾಗೂ ಪೆಟ್ರೋಲ್ - ಡಿಸೇಲ್ ದರ ಹೆಚ್ಚಳ ವಿರೋಧಿಸಿ , ಗುರುವಾರ ಶಿವಮೊಗ್ಗ ನಗರದ ಮಹಾವೀರ ವೃತ್ತಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು . ತೈಲೋತ್ಪನ್ನಗಳ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗುತ್ತಿದೆ . ಇದು ಜನಸಾಮಾನ್ಯರು ಹಾಗೂ ಬಡ ವರ್ಗದವರ ಜೀವನದ ಮೇಲೆ ಪರಿಣಾಮ ಬೀರಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ . ಇದರ ಜೊತೆಗೆ ಅಡುಗೆ ಅನಿಲ ಸಿಲಿಂಡ ದರವೂ ಏರುತ್ತಿದೆ . ಬೆಲೆ ನಿಯಂತ್ರಣಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ . ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ . ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರು ಹಾಗೂ ವಿವಿಧ ವಿಭಾಗಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು . 

Post a Comment

0 Comments