Header Ads Widget

header ads

ಸಾಮಾಜಿಕ ಸೇವಾ ಕ್ಷೇತ್ರದಲ್ಲಿನ ಸೇವೆ ಮಹತ್ವದ್ದು

 



  ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಘ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿಯು ಮುಂಚೂಣಿಯಲ್ಲಿದೆ ಎಂದು ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಎಂ.ಜಿ.ರಾಮಚಂದ್ರಮೂರ್ತಿ ಹೇಳಿದರು.ಶಿವಮೊಗ್ಗ ನಗರದ ರಾಜೇಂದ್ರನಗರದಲ್ಲಿನ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ಭೇಟಿ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು . ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಜಿಲ್ಲಾದ್ಯಂತ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದ್ದು , ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ . ಆರೋಗ್ಯ ಶಿಬಿರಗಳು , ಪರಿಸರ ಸಂರಕ್ಷಣೆ , ಶಾಲಾ ಕಾಲೇಜುಗಳ ಅಭಿವೃದ್ಧಿ , ನಗರದ ಸ್ವಚ್ಛತೆ ಕಾರ್ಯಕ್ರಮ , ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಎರಡೂವರೆ ಸಾವಿರ ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ತಿಳಿಸಿದರು .

Post a Comment

0 Comments