ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ' ಜನರನ್ನು ಉಳಿಸಿ ದೇಶವನ್ನು ಉಳಿಸಿ ' ಎಂಬ ಧೈಯ ವಾಕ್ಯದೊಂದಿಗೆ ಮಂಗಳವಾರ ಶಿವಮೊಗ್ಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು . ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು.ಯಾವುದೇ ಕಾರಣಕ್ಕೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಬಾರದು . ಎಲ್ಲ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು . ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿತು .

0 Comments