Header Ads Widget

header ads

ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣೆ , ಶಸ್ತ್ರ ಚಿಕಿತ್ಸಾ ಶಿಬಿರ


 



 ಬಾರಂದೂರು ವಂದೇ ಮಾತರಂ ಟ್ರಸ್ಟ್ ವತಿಯಿಂದ ತಾಲೂಕಿನ ಅಂತರಗಂಗೆ - ಕೆ.ಎಚ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ , ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ , ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ವೈದ್ಯಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸಾ ಹಾಗು ಸ್ವಯಂ ಪ್ರೇರಿತ ನೇತ್ರದಾನ ನೋಂದಣಿ ಶಿಬಿರ ಆಯೋಜಿಸಲಾಗಿತ್ತು . ಎರೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ್ ಉಮೇಶ್ , ವಂದೇ ಮಾತರಂ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಬಿ.ಎ ಪ್ರಸನ್ನಕುಮಾರ್ ಹಾಗು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಶಿಬಿರ ಉದ್ಘಾಟಿಸಿದರು . ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್ ಶಿಬಿರ ಪರಿಶೀಲನೆ ನಡೆಸಿದರು.ಟ್ರಸ್ಟ್ ಉಪಾಧ್ಯಕ್ಷ ಬಿ . ರೇಣೋಜಿರಾವ್ , ಕಾರ್ತಿಕ್ , ಜಗದೀಶ್ ಹಾಗು ಆರೋಗ್ಯ ಇಲಾಖೆ ಸಿಬ್ಬಂದಿಗಳು , ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ , ತಜ್ಞ ವೈದ್ಯರ ತಂಡ , ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಶಿಬಿರದ ಯಶಸ್ವಿಗೆ ಶ್ರಮಿಸಿದರು . ನೂರಾರು ಮಂದಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು .


Post a Comment

0 Comments