ಶಿವಮೊಗ್ಗ ನಗರದ ಹೊರವಲಯ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ , ನಾಳೆಯಿಂದ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ . ಸಮ್ಮೇಳನಕ್ಕೆ ಸಂಬಂಧಿಸಿದ ಸಕಲ ಪೂರ್ವಭಾವಿ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ ಗೋಪಾಳದ ರಾಮಕೃಷ್ಣ ಶಾಲೆಯ ಸಮೀಪದಿಂದ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆಯ ಮೂಲಕ ಸಾಹಿತ್ಯ ಗ್ರಾಮಕ್ಕೆ ಕರೆತರಲಾಗುತ್ತದೆ . ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ .

0 Comments